Gruhalakshmi Scheme: ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇದೀಗ ಗುಡ್ ನ್ಯೂಸ್ ಎಂದು ಹೇಳಬಹುದಾಗಿದೆ ಯಾಕೆಂದರೆ ಜನವರಿ ಮತ್ತು ಫೆಬ್ರವರಿ ತಿಂಗಳ ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಸ್ಪಷ್ಟವಾದ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತಾರೆ. ಈ ಮಾಹಿತಿಯನ್ನು ಪಡೆದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಜೊತೆಗೆ ಶೇರ್ ಮಾಡಿ.
ಗೃಹಲಕ್ಷ್ಮಿ ಯೋಜನೆ (Gruhalakshmi Scheme)
ಗೃಹಲಕ್ಷ್ಮಿ ಯೋಜನೆಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿರುವಂತಹ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು ಈ ಯೋಜನೆಯು ಮಹಿಳೆಯರಿಗೆ ಉಪಯೋಗವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಯೋಜನೆಯ ಮೂಲಕ ಹಲವಾರು ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ ಏನು ಹೇಳಬಹುದು. ಈ ಯೋಜನೆಯ ಮೂಲಕ ಮಹಿಳೆಯರು ಪ್ರತಿ ತಿಂಗಳು ಕೂಡ 2000 ಹಣವನ್ನು ಪಡುಕೊಂಡಿದ್ದಾರೆ.
ಸರ್ಕಾರವು ಡಿಸೆಂಬರ್ ತಿಂಗಳ ಅಥವಾ 15ನೇ ಕಂತಿನ ಹಣವನ್ನು ಜನವರಿ ತಿಂಗಳಲ್ಲಿ ಬಿಡುಗಡೆ ಮಾಡಿತು. ಇನ್ನುಳಿದಿರುವ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡುವುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಪೂರ್ತಿಯಾದ ಮಾಹಿತಿಯನ್ನು ನೀಡಿರುತ್ತಾರೆ.
ಇದೇ ತಿಂಗಳು ಹಣ ಕ್ಲಿಯರ್.?
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣದ ಬಗ್ಗೆ ಗೃಹಲಕ್ಷ್ಮಿ ಯೋಜನೆಯ ಪ್ರಮುಖ ಪಾತ್ರ ವಹಿಸುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಪೆಂಡಿಂಗ್ ಇರುವ ಹಣದ ಬಗ್ಗೆ ಪ್ರಶ್ನೆ ಮಾಡಿದಾಗ ಇದಕ್ಕೆ ಸಂಬಂಧಿಸಿದ ಹಾಗೆ ಪೂರ್ಣ ಮಾಹಿತಿಯನ್ನು ಅವರು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಕಾರಣಕ್ಕೂ ಪರಷ್ಕರಣೆ ಮಾಡಲಾಗುವುದಿಲ್ಲ ಎಂದು ಸಚಿವೆ ತಿಳಿಸಿರುತ್ತಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಚಿವೆಯು ಮುಂಬರುವ ದಿನಮಾನಗಳಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ರೀತಿಯ ಪರಿಸ್ಕರಣೆ ಮಾಡುವುದಿಲ್ಲ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿರುವಂತ ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎರಡು ಕಂತಿನ ಹಣವನ್ನು ಅಥವಾ ನಾಲ್ಕು ಸಾವಿರ ರೂಪಾಯಿಯನ್ನು ಇದೇ ತಿಂಗಳು ಅಂದರೆ ಮಾರ್ಚ್ 31 ನೇ ತಾರೀಖಿನ ಒಳಗಾಗಿ ಜಮಾ ಮಾಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸುತ್ತಾರೆ. ಎರಡು ಕಂತಿನ ಒಟ್ಟು ನಾಲ್ಕು ಸಾವಿರ ರೂಪಾಯಿ ಹಣವನ್ನು ಒಟ್ಟಿಗೆ ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಸಚಿವರು ಮಾಹಿತಿ ತಿಳಿಸಿರುತ್ತಾರೆ.
ಒಟ್ಟಿಗೆ ₹4,000 ಹಣ ಜಮಾ.!
ಗೃಹಲಕ್ಷ್ಮಿ ಯೋಜನೆಯ ದೊಡ್ಡ ಯೋಜನೆಯಾಗಿದ್ದು ಇಲ್ಲಿಯವರೆಗೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣವನ್ನು ಕ್ಲಿಯರ್ ಮಾಡಲಾಗಿರುತ್ತದೆ. ಜನವರಿ ಮತ್ತು ಫೆಬ್ರವರಿ ತಿಂಗಳ ಹಣವನ್ನು ಸದ್ಯದಲ್ಲೇ ಕ್ಲಿಯರ್ ಮಾಡಲಾಗುತ್ತದೆ. 15 ದಿನಗಳ ಒಳಗಾಗಿ ಪೆಂಡಿಂಗ್ ಇರುವಂತಹ ಹಣವನ್ನು ಮಹಿಳೆಯರ ಖಾತೆಗೆ ಜಮ ಮಾಡುತ್ತೇವೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
2 thoughts on “Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 4,000 ಹಣ ಇದೇ ತಿಂಗಳು ಕ್ಲಿಯರ್.! ಇಲ್ಲಿದೆ ಸಚಿವೆ ನೀಡಿದ ಮಾಹಿತಿ.!”