Colgate Scholarship: ಭಾರತದ ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವಂತಹ ಕೋಲ್ಗೇಟ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಇದೀಗ ಒಂದು ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದೆ. ಕೀಪ್ ಇಂಡಿಯಾ ಸ್ಮಲಿಂಗ್ ಎಂಬ ವಿದ್ಯಾರ್ಥಿ ವೇತನದ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 75,000 ವಿದ್ಯಾರ್ಥಿ ವೇತನವನ್ನು ನೀಡುವ ಗುರಿಯನ್ನು ಹೊಂದಿದೆ.
ಈ ಒಂದು ವಿದ್ಯಾರ್ಥಿ ವೇತನವನ್ನು ಡೆಂಟಲ್ ಸರ್ಜರಿ ಓದುತ್ತಿರುವ ಅಥವಾ ಸಂಘ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಲ್ಪಟ್ಟಿದ್ದು, ಉನ್ನತವಾದ ಮಟ್ಟದಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವು ನೆರವಾಗುವಂತಹ ಉದ್ದೇಶವನ್ನು ಹೊಂದು ನೀಡಲಾಗುತ್ತಿದೆ.
ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಮಟ್ಟದ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಮತ್ತು ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳಿರಬೇಕು ಹೀಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ನೋಡಿ.
ಅರ್ಜಿ ಸಲ್ಲಿಸಲು ಅರ್ಹತೆಗಳು!
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಭಾರತೀಯ ನಾಗರಿಕನಾಗಿರಬೇಕು.
- 12ನೇ ತರಗತಿಯಲ್ಲಿ ಕನಿಷ್ಠ 65 ಪರ್ಸೆಂಟ್ ಅಂಕಗಳನ್ನು ಗಳಿಸಿರಬೇಕು.
- ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- BDS/MDS ಕೊರ್ಸ್ನಲ್ಲಿ ಅಧ್ಯಯನ ಮಾಡುತ್ತಿರಬೇಕು ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಗುರುತಿನ ಚೀಟಿ
- ಶುಲ್ಕ ತುಂಬಿದ ರಶೀದಿ
- ಹಿಂದಿನ ತರಗತಿಯ ಅಂಕಪಟ್ಟಿ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈ ಕೆಳಗೆ ನೀಡಿರುವಂತಹ ಲಿಂಕ್ ಬಳಸಿ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ಮೇಲೆ ಅರ್ಹತಾ ಮತ್ತು ದಾಖಲೆಗಳ ಪಟ್ಟಿಯನ್ನು ನೀಡಲಾಗಿರುತ್ತದೆ ಅವುಗಳನ್ನು ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಲಿಂಕ್: https://www.b4s.in/knah/CKISSP7
ಮೇಲೆ ನೀಡಿರುವಂತಹ ಲಿಂಕ್ ಬಳಸಿ ನವೆಂಬರ್ 9ನೇ ತಾರೀಕು 2025ನೇ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿದರೆ ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ ಎಂಬ ಮಾಹಿತಿಯನ್ನು ತಿಳಿಸಲಾಗಿದೆ.