Gruhalakshmi Scheme: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವಂತಹ ವಿಷಯವೆಂದರೆ, ಗೃಹಲಕ್ಷ್ಮಿ ಯೋಜನೆಯ ಹಣವು ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಜಮಾ ಆಗುವ ಸಾಧ್ಯತೆಯಿದ್ದು ಯಾವಾಗ ಹಣ ಜಮಾ ಆಗಲಿದೆ ಎಂಬ ಕುರಿತಾದ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ ಕೊನೆಯ ತನಕ ಓದಿರಿ.
ಕಾಂಗ್ರೆಸ್ ಸರ್ಕಾರವು ನೀಡಿರುವ 5 ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಎಂದೇ ಹೇಳಬಹುದು. ರಾಜ್ಯದಲ್ಲಿ ಹಲವಾರು ಫಲಾನುಭವಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಇಲ್ಲಿಯವರೆಗೆ ತಲುಪಿದೆ ಆದರೆ ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ದೊರಕುವಲ್ಲಿ ವಿಳಂಬ ಉಂಟಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವಂತಹ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ದೀಪಾವಳಿ ಹಬ್ಬಕ್ಕೂ ಮುನ್ನ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತು ಹಣ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ ಎಂದು ಮಾಧ್ಯಮಗಳಿಂದ ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇಲ್ಲಿಯವರೆಗೆ ಸರಿಸುಮಾರು 24 ಕಂತುಗಳ ವರೆಗೆ ಹಣವನ್ನು ಪಡೆದಿರಬಹುದು ಅಂದರೆ 48000 ಹಣವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಪಡೆದಿರುತ್ತಾರೆ. ಎರಡು ವರ್ಷಗಳನ್ನು ಪೂರೈಸಿರುವ ಈ ಯೋಜನೆಯು ಅತ್ಯಂತ ಜನಪ್ರಿಯವಾದ ಯೋಜನೆಯಾಗಿದೆ.
ಆದರೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ 4000, 2 ಕಂತಿನ ಹಣವನ್ನು ಇನ್ನೂ ಕೂಡ ಜಮಾ ಮಾಡಿಲ್ಲ. ಇದರ ಕುರಿತಾಗಿ ಲಕ್ಷ್ಮಿ ಹೆಬ್ಬಾಳಕಾರ ಅವರು ಆಗಸ್ಟ್ ತಿಂಗಳ ಅಂತ್ಯದೊಳಗೆ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡುವಂತಹ ಪ್ರಯತ್ನ ಮಾಡುತ್ತೇವೆ ಎಂದು ಮಾಹಿತಿಯನ್ನು ನೀಡಿರುತ್ತಾರೆ.
ಕೆಲವು ಮಹಿಳೆಯರು ಹಾಗೂ ಕೆಲವು ಜಿಲ್ಲೆಯ ಮಹಿಳೆಯರಿಗೆ ತಾಂತ್ರಿಕ ಕಾರಣಗಳಿಂದ ಹಾಗೂ ಇನ್ನಿತರ ಸಮಸ್ಯೆಗಳಿಂದ ಹಣ ಜಮಾ ಆಗುವುದು ವಿಳಂಬವಾಗಿರಬಹುದು, ಒಟ್ಟಾರೆಯಾಗಿ ಬಾಕಿ ಇರುವ ಎಲ್ಲಾ ಕಂತಿನ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ತಲುಪಿಸುವ ವಿಚಾರ ನಡೆದಿದೆ ಎಂದು ಸಚಿವರು ತಿಳಿಸಿರುತ್ತಾರೆ.